(www.vknews.in) ಸಂಘಪರಿವಾರ ಕೋಮು ದ್ವೇಷದ ನಂಜಿನ ಪರಿಣಾಮ ಇಡೀ ದೇಶವೇ ಹೊತ್ತಿ ಉರಿಯುತ್ತಿದೆ. ಮಣಿಪುರದಲ್ಲಿ ಜಾನಾಂಗೀಯ ಕಲಹ, ಹರಿಯಾಣಾದಲ್ಲಿ ಕೋಮು ಗಲಭೆ, ಮಹಾರಾಷ್ಟ್ರದಲ್ಲಿ RPF ಯೋಧನ ಕೋಮು ದ್ವೇಷಕ್ಕೆ ರೈಲಿನಲ್ಲಿ ಅಮಾಯಕರ ಬಲಿ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಹಿಂಸಾಚಾರ ಹಬ್ಬಿಕೊಂಡಿದೆ. ಇಂತಹ ಸನ್ನಿವೇಶಕ್ಕೆ ಕಾರಣವಾದ ಬಿಜೆಪಿ ಮತ್ತು ಸಂಘಪರಿವಾರದ ದ್ವೇಷದ ರಾಜಕಾರಣವನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ತೀವ್ರವಾಗಿ ಖಂಡಿಸುತ್ತದೆ ಪ್ರಜಾ ಪ್ರಭುತ್ವದಲ್ಲಿ ಎಲ್ಲರಿಗು ಬದುಕುವ ಹಕ್ಕಿದೆ ಬಿಜೆಪಿ ಪಕ್ಷಕ್ಕೆ ಹಿಂಸಾಚಾರ, ಕೋಮು ದ್ವೇಷ ರಾಜಕೀಯ ಅಸ್ತ್ರ ಆ ಕಾರಣಕ್ಕಾಗಿಯೇ ಮೂರು ತಿಂಗಳಿಂದ ಮಣಿಪುರ ಹೊತ್ತಿ ಉರಿಯುತ್ತಿದ್ದರೂ ಅಲ್ಲಿ ಶಾಂತಿ ನೆಲೆಸಲು ಕಾನೂನು ಸುವ್ಯವಸ್ಥೆ ಪ್ರಯತ್ನ ಕೇಂದ್ರ ಸರ್ಕಾರ ಮಾಡಿಲ್ಲ ಈ ದೇಶದ ಪ್ರಧಾನಿ ಮೋದಿ ಅಲ್ಲಿನ ಜನರಿಗೆ ಶಾಂತಿ ಕಾಪಾಡಿ ಎಂದು ಹೇಳುವ ತಮ್ಮ ಕನಿಷ್ಠ ಕರ್ತವ್ಯವನ್ನೂ ಪಾಲಿಸಲಿಲ್ಲ. ಮಣಿಪುರ ಎಂಬ ಪದ ಬಳಸಲೂ ಹಿಂಜರಿದರು. ಇಬ್ಬರು ದಲಿತ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಅತ್ಯಾಚಾರ ಪ್ರಕರಣ ಹೊರ ಬಂದಾಗ ವಿಧಿ ಇಲ್ಲದೆ ಮಣಿಪುರದ ಬಗ್ಗೆ ಮೋದಿ ಮಾತನಾಡಿದರಾದರೂ ಅವರ ಮಾತಿನಲ್ಲಿ ಘಟನೆಯ ಕುರಿತು ವಿಷಾದ ಅಥವಾ ನೋವಿಗಿಂತ ಹೆಚ್ಚಾಗಿ, ಈ ಘಟನೆಯಿಂದ ತಮ್ಮ ಇಮೇಜಿಗೆ ಧಕ್ಕೆಯಾಗಿದೆ ಅನ್ನುವ ಸಿಟ್ಟು ಎದ್ದು ಕಾಣುತ್ತಿತ್ತು. ಎಂದು ಆಕ್ರೋಶ ವ್ಯಕ್ತ ಪಡಿಸಿದರು ಇನ್ನು ಹರಿಯಾಣಾದಲ್ಲಿ ಕಳೆದ 4 ದಿನಗಳಿಂದ ನಡೆಯುತ್ತಿರುವ ಹಿಂಸಾಚಾರದಲ್ಲಿ ಗೋ ರಕ್ಷಣೆ ಹೆಸರಿನಲ್ಲಿ ಅಮಾಯಕರನ್ನು ಕೊಂದು ತಲೆ ಮರೆಸಿಕೊಂಡಿರುವ ಮೋನು ಮನೇಸರ್ ಹರಿಬಿಟ್ಟ ಪ್ರಚೋದನಕಾರಿ ವೀಡಿಯೊ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ಆತ ಹಾಕಿದ ಸವಾಲು ಸಾರ್ವಜನಿಕ ಜೀವನದಲ್ಲಿ ಭಯ ಹುಟ್ಟಿಸುತ್ತಿದೆ ಮುಖ್ಯ ಕಾರಣ. ಇಷ್ಟೆಲ್ಲ ಬೆಳವಣಿಗೆಗಳು ನಡೆದಿದ್ದರೂ ಅಲ್ಲಿನ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ವಿಫಲರಾದರು. ಅಲ್ಲಿ ಮಸೀದಿಗಳಿಗೆ ಬೆಂಕಿ ಹಚ್ಚಿ ಒಬ್ಬರು ಇಮಾಮರನ್ನು ಕೊಲೆ ಮಾಡಲಾಗಿದೆ ಮತ್ತು 5 ಮಂದಿ ಅಮಾಯಕರು ಜೀವ ತೆತ್ತಿದ್ದಾರೆ.ದೇಶದ ಎಲ್ಲೆಡೆ ಹಬ್ಬಿದ ದ್ವೇಷದ ವಿಷ ರೈಲ್ವೆ ಭದ್ರತಾ ಸಿಬ್ಬಂದಿಯ ತಲೆಗೂ ಹೊಕ್ಕಿದ್ದು ದುರಂತ. ಮಹಾರಾಷ್ಟ್ರದಲ್ಲಿ RPF ಯೋಧ ಚೇತನ್ ಸಿಂಗ್ ರೈಲಿನಲ್ಲಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ತನ್ನ ಉನ್ನತ ಅಧಿಕಾರಿಯನ್ನು ಗುಂಡಿಕ್ಕಿ ಕೊಂದು ನಂತರ, ಭೋಗಿಯಿಂದ ಭೋಗಿಗೆ ಹೋಗಿ ಮುಸ್ಲಿಂ ಪ್ರಯಾಣಿಕರನ್ನು ಹುಡುಕಿ 3 ಜನ ಅಮಾಯಕ ಮುಸ್ಲಿಂ ಪ್ರಯಾಣಿಕರನ್ನು ಕೊಂದಿದ್ದಾನೆ. ಇದು ದೇಶದಲ್ಲಿ ಸಂಘಪರಿವಾರಾದ ಜೊತೆ ಸೇರಿಕೊಂಡು ಗೋದಿ ಮಾಧ್ಯಮ ಹಬ್ಬಿರುವ ದ್ವೇಷದ ಪರಿಣಾಮ ಎಂಬುದು ಹತ್ಯಾಕಾಂಡದ ನಂತರ ಯೋಧ ಮಾತನಾಡಿರುವ ಮಾತುಗಳಿಂದ ಸ್ಪಷ್ಟವಾಗುತ್ತದೆ. ಈ ಎಲ್ಲ ಘಟನೆಗಳನ್ನು ಎಸ್.ಡಿ.ಪಿ.ಐ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಮತ್ತು ಇಂತಹ ಕೃತ್ಯಗಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸುತ್ತದೆ ಎಂದು SDPI ನ ಪದಾಧಿಕಾರಿಗಳು ಮನವಿಯಲ್ಲಿ ಆಗ್ರಹಿಸಿದ್ದಾರೆ ಈ ಸಮಯದಲ್ಲಿ ದಾವಣಗೆರೆ ಜಿಲ್ಲಾ ಅಧ್ಯಕ್ಷರಾದ ಇಸ್ಮಾಯಿಲ್ ಜಬಿವುಲ್ಲಾ ,ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಸೈಯದ್ ಅಶ್ಫಾಕ್,ಜಿಲ್ಲಾ ಕೋಶಾಧಿಕಾರಿ ಎಆರ್ ತಾಹಿರ್, ದಾವಣಗೆರೆ ಜಿಲ್ಲಾ ಸಮಿತಿ ಸದಸ್ಯರು ಹಾಗೂ ಹರಿಹರ ವಿಧಾನಸಭಾ ಕ್ಷೇತ್ರದ SDPI ಸದಸ್ಯರು , ಕಾರ್ಯಕರ್ತರು ಉಪಸ್ಥಿತರಿದ್ದರು
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.