ಅಟೋ ರಿಕ್ಷಾದಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸುವವರು ನೋಡಿ, ನೀವು ಮಕ್ಕಳನ್ನು ಶಾಲೆಗೆ ಕಳಿಸುವ ಅಟೋ ಚಾಲಕ ಸಮಾಧಾನಿ ಆಗಿರಲಿ..
ವಿಶಾಖಪಟ್ಟಣಂ (www.vknews.in) : ವಿಶಾಖಪಟ್ಟಣಂನಲ್ಲಿ ಆಟೋರಿಕ್ಷಾ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಎಂಟು ಶಾಲಾ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ನಗರದ ಸಂಗಮ್ ಶರತ್ ಥಿಯೇಟರ್ ಸಮೀಪ ನಡೆದ ಈ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ವಿದ್ಯಾರ್ಥಿಗಳು ಎಂದಿನಂತೆ ಮುಂಜಾನೆ ಶಾಲೆಗೆ ಆಟೋದಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಲಾರಿ ಫ್ಲೈಓವರ್ ಕೆಳಭಾಗದಲ್ಲಿನ ರಸ್ತೆಯಲ್ಲಿ ಸಿಗ್ನಲ್ ದಾಟುತ್ತಿರುವಾಗ ವೇಗವಾಗಿ ಬಂದ ಆಟೋರಿಕ್ಷಾ ಅದಕ್ಕೆ ಢಿಕ್ಕಿ ಹೊಡೆದಿದೆ. ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಮಕ್ಕಳನ್ನು ಸ್ಥಳೀಯರು ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎನ್ನಲಾಗಿದೆ.
https://twitter.com/vknews_official/status/1727733195242897856
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.