ಮಂಗಳೂರು (www.vknews.in) ; ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಅಂಗಡಿಯೊಂದರ ಇಬ್ಬರು ಉದ್ಯೋಗಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ ಎಸಗಿದ ಇಬ್ಬರು ಆರೋಪಿಗಳನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಅಕ್ಷಯ್ ರಾವ್ ಮತ್ತು ಶಿಬಿನ್ ಪಡಿಕ್ಕಲ್ ಎಂದು ಗುರುತಿಸಲಾಗಿದೆ.
ಸೋಮವಾರ ರಾತ್ರಿ ಸುಮಾರು 8 ಗಂಟೆಗೆ ನಗರದ ಮುಳಿಹಿತ್ಲು ಎಂಬಲ್ಲಿನ ಎಂಎಸ್ ಸ್ಪೋರ್ಟ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನೂರುಲ್ಲಾ ಅಮೀನ್ ಮತ್ತು ಸೌಜನ್ಯಾ ಎಂಬವರು ಮೊಬೈಲ್ ರಿಪೇರ್ ಮಾಡಿಸಿಕೊಂಡು ನಗರದ ಮಿಲಾಗ್ರಿಸ್ ಚರ್ಚ್ ಕಡೆಯಿಂದ ಭಗಿನಿ ಸಮಾಜದ ಕಡೆಗೆ ಬೈಕ್ ನಲ್ಲಿ ತೆರಳುವಾಗ ಈ ಇಬ್ಬರು ಆರೋಪಿಗಳು ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದು ಅನೈತಿಕ ಪೊಲೀಸ್ ಗಿರಿ ಎಸಗಿದ ಹಿನ್ನಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341, 354 ರ ಅಡಿ ಪ್ರಕರಣ ದಾಖಲಿಸಲಾಗಿದೆ ಎನ್ನಲಾಗಿದೆ
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.