ಬಂಟ್ವಾಳ (www.vknews.in) : ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾವು ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭಾನುವಾರ ಸಂಚರಿಸಿತು. ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ಜಾಥವನ್ನು ಉದ್ಘಾಟಿಸಿದರು. ಹಿಂದುಳಿದ ವರ್ಗಗಳ ತಾಲೂಕು ಅಧಿಕಾರಿ ಶ್ರೀಮತಿ ಬಿಂದಿಯೋ ಸಂವಿಧಾನ ಪೀಠಿಕೆ ಓದಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಮೋಹಿನಿ, ಮಾಜಿ ಉಪಾಧ್ಯಕ್ಷ ಪ್ರಕಾಶ್ ಮುಡಿಮುಗೇರ್, ಪಂಚಾಯತ್ ಸದಸ್ಯರಾದ ರವೀಂದ್ರ ಸಪಲ್ಯ, ಕಿಶೋರ್ ಶೆಟ್ಟಿ, ರವಿ ಅಂಚನ್, ರಂಜಿತ್ ಕಡ್ಡೆಲ್, ಉಷಾರಾಮ್, ಪಂಚಾಯತ್ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹರೀಶ್ ಸ್ವಾಗತಿಸಿ, ವಂದಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.