ಸುರತ್ಕಲ್ (www.vknews.in) : ಕೃಷ್ಣಾಪುರದ ಬಿಲಾಲ್ ಚಾರಿಟೇಬಲ್ ಟ್ರಸ್ಟ್ ಕರ್ನಾಟಕ (ರಿ) ಇದರ ನೂತನ ಕಛೇರಿ ಉದ್ಘಾಟನೆ ಮತ್ತು ಲೋಗೋ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸಂಸ್ಥೆಯ ನೂತನ ಕಛೇರಿಯನ್ನು ಉದ್ಘಾಟಿಸಿದ ಮೌಲಾನ ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು ಮಾತನಾಡಿ ಮುಂಬರುವ ಆಗಸ್ಟ್ ತಿಂಗಳಲ್ಲಿ ನಡೆಯುವ ಐದು ಜೋಡಿ ಬಡ ಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಕಾರ್ಯ ಕ್ರಮದ ಕುರಿತು ಮಾಹಿತಿ ನೀಡಿದರು.
ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಪಿ.ಕೆ ಇಸ್ಮಾಯಿಲ್ ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸಯ್ಯದ್ ಅಬೂಬಕರ್, ಅಬ್ದುಲ್ ಖಾದರ್ ಮದನಿ ಮಾತನಾಡಿ ಶುಭ ಹಾರೈಸಿದರು. ಸಂಸ್ಥೆಯ ಪದಾಧಿಕಾರಿಗಳಾದ ಆಸಿಫ್, ಸಿನಾನ್, ಶಾಹಿಲ್, ಮಜೀದ್, ಹಮೀದ್ ಮತ್ತು ಊರಿನ ಗಣ್ಯರು ಭಾಗವಹಿಸಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.