ದುಬೈ (www. vknews.in) : ನೂರುಲ್ ಹುದಾ ಇಸ್ಲಾಮಿಕ್ ಅಕಾಡೆಮಿ ಮಾಡನ್ನೂರು ವಿದ್ಯಾ ಸಂಸ್ಥೆಯ ಅಧೀನ ಸಂಘಟನೆ ನೂರುಲ್ ಹುದಾ ಯುಎಇ ರಾಷ್ಟ್ರೀಯ ಸಮಿತಿಯ ಅಧೀನದಲ್ಲಿ ಮಾರ್ಚ್ 29 ರಂದು ದುಬೈಯಲ್ಲಿ ಬೃಹತ್ ಇಫ್ತಾರ್ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ನೂರುಲ್ ಹುದಾ ಇಸ್ಲಾಮಿಕ್ ಅಕಾಡೆಮಿ ಮಾಡನ್ನೂರು ಪ್ರಾಂಶುಪಾಲ ಅಡ್ವೋಕೇಟ್ ಹನೀಫ್ ಹುದವಿ ಅವರಿಗೆ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ಕೋರಲಾಯಿತು.
ಈ ಸಂದರ್ಭದಲ್ಲಿ ನೂರುಲ್ ಹುದಾ ಯುಎಇ ರಾಷ್ಟ್ರೀಯ ಸಮಿತಿಯ ಗೌರವಾಧ್ಯಕ್ಷರಾದ ಸಯ್ಯದ್ ಅಸ್ಕರ್ ಅಲಿ ತಂಙಳ್, ಅಧ್ಯಕ್ಷರಾದ ಜನಾಬ್ ಶೆರೀಫ್ ಕಾವು, ಪ್ರಧಾನ ಕಾರ್ಯದರ್ಶಿ ಜನಾಬ್ ಹೈದರ್ ಅಲಿ ಈಶ್ವರಮಂಗಲ, ದುಬೈ ಸಮಿತಿ ಅಧ್ಯಕ್ಷರಾದ ಜನಾಬ್ ಅನ್ವರ್ ಮಾಣಿಲ, ಯುಎಇ ಸಮಿತಿ ಸಂಘಟನಾ ಕಾರ್ಯದರ್ಶಿ ಅಬ್ದುಲ್ ಅಝೀಝ್ ಸೋಂಪಾಡಿ, ಕಾರ್ಯದರ್ಶಿ ಉಸ್ತಾದ್ ಬಷೀರ್ ಹುದವಿ ಮೊದಲಾದವರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.