ಬೆಂಗಳೂರು (www.vknews.in) : ಜೂ.3ರಂದು ನಡೆಯಲಿರುವ ವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದ 6 ಸ್ಥಾನಗಳಿಗೆ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡಾಯವಾಗಿ ಕಣಕ್ಕಿಳಿದಿರುವ ಐವರನ್ನು ಕಾಂಗ್ರೆಸ್ ಪಕ್ಷ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷ ಕಾಲ ಉಚ್ಛಾಟಿಸಿದೆ.
ನೈಋತ್ಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ ಎಸ್.ಪಿ. ದಿನೇಶ್ (ಶಿವಮೊಗ್ಗ), ಬೆಂಗಳೂರು ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ ಫರ್ಡಿನಾಂಡ್ ಲಾರೆನ್ಸ್ (ಬೆಂಗಳೂರು), ನೈಋತ್ಯ ಶಿಕ್ಷಕರ ಕ್ಷೇತ್ರದ ಬಂಡಾಯ ಅಭ್ಯರ್ಥಿ ಬಿ.ಆರ್. ನಂಜೇಶ್ (ಚಿಕ್ಕಮಗಳೂರು), ಆಗ್ನೇಯ ಶಿಕ್ಷಕರ ಕ್ಷೇತ್ರದ ಬಂಡಾಯ ಅಭ್ಯರ್ಥಿಗಳಾದ ಲೋಕೇಶ್ ತಾಳಿಕಟ್ಟೆ (ಚಿತ್ರದುರ್ಗ) ಹಾಗೂ ವಿನೋದ್ ಶಿವರಾಜ್ (ಬೆಂಗಳೂರು) ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೂಚನೆ ಮೇರೆಗೆ ಉಚ್ಚಾಟಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.