ಬಂಟ್ವಾಳ (www.vknews. in) : ಮಾರ್ನಬೈಲು ಇಲ್ಲಿನ ಮೆಲ್ಕಾರ್ ಮಹಿಳಾ ಪದವಿ ಪೂರ್ವ, ಕಾಲೇಜ್ 2023 -24 ನೇ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದಲ್ಲಿ ನೂರು ಶೇಕಡ ಫಲಿತಾಂಶವನ್ನು ಪಡೆದಿದ್ದು, ಈ ಸಾಧನೆಯನ್ನು ಪರಿಗಣಿಸಿ, ಮುಸ್ಲಿಂ ಎಜುಕೇಶನ್ ಇನ್ಸ್ಟಿಟ್ಯೂಷನ್ ಫೆಡರೇಶನ್ (MIEF) ಇವರು ಕೊಡಮಾಡುವ ಎಕ್ಸಲೆನ್ಸ್ ಅವಾರ್ಡನ್ನು ಕಾಲೇಜು ಆಡಳಿತ ಮಂಡಳಿ ಚೇರ್ಮನ್ ಎಸ್ಎಂ ರಶೀದ್ ಹಾಜಿ ಪಡೆದುಕೊಂಡರು.
ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಮೀಫ್ ವಾರ್ಷಿಕ ಸಮ್ಮೇಳನದ ವೇದಿಕೆಯಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಯೇನೆಪೋಯ ವಿಶ್ವವಿದ್ಯಾನಿಲಯದ ಪ್ರೊ ಚಾನ್ಸಲರ್ ಫರಾಝ್ ಅಹಮದ್, ಪ್ರೆಸಿಡೆನ್ಸಿ ಯುನಿವರ್ಸಿಟಿ ಚಾನ್ಸಲರ್ ನಿಸಾರ್ ಅಹಮದ್, ಬ್ಯಾರೀಸ್ ಗ್ರೂಪ್ ಆಫ್ ಎಜುಕೇಶನ್ ಅಧ್ಯಕ್ಷ ಸೈಯದ್ ಬ್ಯಾರಿ, ಮೀಫ್ ಅಧ್ಯಕ್ಷ ಮೂಸಬ್ಬ ಬ್ಯಾರಿ ಮೊದಲಾದವರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.