ಬಂಟ್ವಾಳ (www.vknews. in) : ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸಹ ಸವಾರರಾಗಿ ಪ್ರಯಾಣಿಸುತ್ತಿದ್ದ ಮಹಿಳೆಯೋರ್ವಳು ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಕಲ್ಪನೆ ಸಮೀಪದ ಕುಂಟಲ್ ಪಾಡಿ ಎಂಬಲ್ಲಿ ಗುರುವಾರ ರಾತ್ರಿ ವೇಳೆ ನಡೆದಿದೆ. ಬಿ.ಸಿ.ರೋಡಿನ ಕೊಡಂಗೆ ನಿವಾಸಿ ಮೋಹಿನಿ ಶೆಟ್ಟಿ (68) ಮೃತಪಟ್ಟ ಮಹಿಳೆಯಾಗಿದ್ದಾರೆ.
ಮನೆಯ ಪಕ್ಕದ ವ್ಯಕ್ತಿಯೊರ್ವನ ಬೈಕಿನಲ್ಲಿ ಹಿಂಬದಿಯಲ್ಲಿ ಕುಳಿತುಕೊಂಡು ಅವರು ಕಲ್ಪನೆಯಲ್ಲಿರುವ ಮಗನ ಮನೆಗೆ ಪ್ರಯಾಣಿಸುತ್ತಿದ್ದ ವೇಳೆ ಕುಂಟಲ್ ಪಾಡಿ ಎಂಬಲ್ಲಿ ಬೈಕ್ ಸ್ಕಿಡ್ ಆಗಿ ರಸ್ತೆ ಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಬಂಟ್ವಾಳ ಆಸ್ಪತ್ರೆಗೆ ಕೊಂಡು ಹೋಗಲಾಯಿತಾದರೂ ಅದಾಗಲೇ ಮಹಿಳೆ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.