ಸೂರತ್ (www.vknews.in) : ಮಳೆ ನೀರಿನಿಂದ ತುಂಬಿದ್ದ ಹೊಂಡಕ್ಕೆ ಒಂದೇ ಕುಟುಂಬದ ಮೂವರು ಮಕ್ಕಳು ಬಿದ್ದು ದಾರುಣ ಅಂತ್ಯ ಕಂಡಿದ್ದಾರೆ. ಗುಜರಾತ್ನ ಚಾರ್ವಾಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಕ್ಕಳು ಆಟವಾಡುತ್ತಿದ್ದ ವೇಳೆ ಮನೆಯ ಹಿಂದೆ ಮಳೆ ನೀರು ತುಂಬಿದ್ದ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ.
ಮಕ್ಕಳು ಮನೆಗೆ ಹಿಂತಿರುಗದ ಹಿನ್ನೆಲೆಯಲ್ಲಿ ಮನೆಯವರು ತಡವಾಗಿ ಹುಡುಕಾಡಿದಾಗ ಪತ್ತೆಯಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಉಳಿಸಲು ಸಾಧ್ಯವಾಗಲಿಲ್ಲ. ಸಂಜೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಏಳು ವರ್ಷದ ಅವಳಿಗಳಾದ ಹರ್ಷ್ ತಿವಾರಿ ಮತ್ತು ರಿಧಿ ತಿವಾರಿ ಮತ್ತು ಒಂಬತ್ತು ವರ್ಷದ ಅರುಷಿ ಸೋಲಂಕಿ ಸಾವನ್ನಪ್ಪಿದ್ದಾರೆ ಎಂದು ಡುಂಗ್ರಾ ಪೊಲೀಸ್ ಇನ್ಸ್ಪೆಕ್ಟರ್ ಎಸ್ಪಿ ಗೋಹಿಲ್ ತಿಳಿಸಿದ್ದಾರೆ.
ಅವರು ವಾಸಿಸುತ್ತಿದ್ದ ಮನೆಯ ಹಿಂದೆ ವಿಶಾಲವಾದ ಪ್ರದೇಶವಿದೆ. ಆ ಜಾಗದಲ್ಲಿ ದೊಡ್ಡ ಹೊಂಡವೂ ಇತ್ತು. ಆಟವಾಡುತ್ತಿದ್ದಾಗ ಮಳೆ ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ತಿಳಿಸಿದ್ದಾರೆ. ಗುಂಡಿಯ ಕೆಸರಿನಲ್ಲಿ ಸಾವಿಗೆ ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.