ನವದೆಹಲಿ (www.vknews.in) : ಹಿಂದೂ ಯಾತ್ರಾ ಕೇಂದ್ರಗಳಲ್ಲಿ ಮುಸ್ಲಿಮರು ಪೂಜಾ ಸಾಮಗ್ರಿಗಳನ್ನು ಮಾರಾಟ ಮಾಡುವುದನ್ನು ನಿಲ್ಲಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಒತ್ತಾಯಿಸಿದೆ. ಮುಸ್ಲಿಂ ಗುರುತನ್ನು ಮರೆಮಾಚುವ ಮೂಲಕ ಇಂತಹ ಮಾರಾಟ ಕೇಂದ್ರಗಳನ್ನು ನಡೆಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಎಲ್ಲ ರಾಜ್ಯ ಸರ್ಕಾರಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿಎಚ್ಪಿ ಆಗ್ರಹಿಸಿದೆ.
ಸಂಘಟನೆಯ ಪ್ರಧಾನ ಕಾರ್ಯದರ್ಶಿ ಬಜರಂಗ್ ಬಾಗ್ರಾ ಅವರು ವಿಚಿತ್ರವಾದ ಬೇಡಿಕೆಯನ್ನು ಮುಂದಿಟ್ಟರು. ಕೇದಾರನಾಥ ಸೇರಿದಂತೆ ಯಾತ್ರಾ ಕೇಂದ್ರಗಳಲ್ಲಿ ಮುಸ್ಲಿಮರು ಪೂಜಾ ಸಾಮಗ್ರಿಗಳನ್ನು ಮಾರಾಟ ಮಾಡುತ್ತಿದ್ದಾರೆ. ಮಾರಾಟಗಾರರು ಎಲ್ಲಾ ಪೂಜಾ ಸಾಮಗ್ರಿಗಳು ಮತ್ತು ಪ್ರಸಾದದ ಮೇಲೆ ಉಗುಳುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಸರಕಾರ ಮಧ್ಯ ಪ್ರವೇಶಿಸಿ ಇಲ್ಲಿನ ಮುಸ್ಲಿಮರನ್ನು ತಡೆಯಬೇಕು. ವಿಎಚ್ಪಿ ರಾಷ್ಟ್ರೀಯ ವಕ್ತಾರ ವಿನೋದ್ ಬನ್ಸಾಲ್ ಕೂಡ ಇದೇ ಆರೋಪವನ್ನು ಮುಂದಿಟ್ಟಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.