ಹೈದರಾಬಾದ್ (www.vknews.in) : ಆಂಧ್ರಪ್ರದೇಶದಲ್ಲಿ ವೈ.ಎಸ್.ಆರ್. ಕಾಂಗ್ರೆಸ್ ಕಾರ್ಯಕರ್ತನನ್ನು ನಡುರಸ್ತೆಯಲ್ಲೇ ಕೊಚ್ಚಿ ಕೊಲೆ ಮಾಡಲಾಗಿದೆ. ವೈ.ಎಸ್.ಆರ್ ಕಾಂಗ್ರೆಸ್ ಯುವ ಕಾರ್ಯಕರ್ತ ಶೇಖ್ ರಶೀದ್ ಕೊಲೆಯಾದವರು. ಬುಧವಾರ ರಾತ್ರಿ 8.30ರ ಸುಮಾರಿಗೆ ಆಂಧ್ರಪ್ರದೇಶದ ಪಲ್ನಾಡು ಎಂಬಲ್ಲಿ ಈ ಘಟನೆ ನಡೆದಿದೆ. ಈ ಭೀಕರ ಹತ್ಯೆಯ ವಿಡಿಯೋಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಪೊಲೀಸರ ಪ್ರಕಾರ ರಶೀದ್ ನನ್ನು ಶೇಖ್ ಜಿಲಾನಿ ಕೊಂದಿದ್ದಾನೆ. ಬಿಡುಗಡೆಯಾದ ದೃಶ್ಯಗಳಲ್ಲಿ ಜಿಲಾನಿ ಜನನಿಬಿಡ ರಸ್ತೆಯಲ್ಲಿ ರಶೀದ್ ಮೇಲೆ ಹಲ್ಲೆ ನಡೆಸಿದ್ದಾನೆ. ರಸ್ತೆಯಲ್ಲಿ ವಾಹನಗಳು ಸಾಗುತ್ತಿದ್ದಾಗ ಜೀಲಾನಿ ಯುವಕನ ಕೈಗಳನ್ನು ಕತ್ತರಿಸಿ ನಂತರ ಕತ್ತು ಕತ್ತರಿಸುವುದು ಸೇರಿದಂತೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಇದೇ ವೇಳೆ ಜಿಲ್ಲಾ ಪೊಲೀಸ್ ವರಿಷ್ಠ ಕಂಚಿ ಶ್ರೀನಿವಾಸ್ ರಾವ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ವೈಯಕ್ತಿಕ ದ್ವೇಷವೇ ಕೊಲೆಗೆ ಕಾರಣ ಎಂದು ಹೇಳಿದ್ದಾರೆ. ಘಟನೆಯ ಹಿಂದೆ ರಾಜಕೀಯ ಅಡಗಿದೆ ಎಂಬ ಆರೋಪವನ್ನು ಪೊಲೀಸರು ಅಲ್ಲಗಳೆದಿದ್ದಾರೆ. ಪ್ರಕರಣದ ವಿವರವಾದ ತನಿಖೆ ನಡೆಯುತ್ತಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥರು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.