ಮಂಗಳೂರು (www.vknews. in) : ರಾಷ್ಟ್ರೀಯ ಹೆದ್ದಾರಿ-275ರ ಸಂಪಾಜೆಯಿಂದ ಮಡಿಕೇರಿವರೆಗಿನ ಕೆಲ ಪ್ರದೇಶಗಳಲ್ಲಿ ಭೂಕುಸಿತ/ ಗುಡ್ಡಕುಸಿತ ಉಂಟಾಗುವ ಸಂಭವವಿರುವುದರಿಂದ, ಮುಂಜಾಗ್ರತಾ ಕ್ರಮವಾಗಿ ಸದ್ರಿ ಮಾರ್ಗವಾಗಿ ಸಾಗುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು (ತುರ್ತು ಸೇವೆಗಳ ಮತ್ತು ಪ್ರಕೃತಿ ವಿಕೋಪ ಸಂಬಂಧಿತ ಕಾರ್ಯದ ನಿಮಿತ್ತ ಕಾರ್ಯನಿರ್ವಹಿಸುವ ಅಧಿಕಾರಿ / ಸಿಬ್ಬಂದಿಗಳು ಸಂಚರಿಸುವ ವಾಹನಗಳನ್ನು ಹೊರತುಪಡಿಸಿ) ಜುಲೈ 18 ರಿಂದ 22 ರವರೆಗೆ ಪ್ರತಿ ದಿನ ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯ ಮುಖಾಂತರ, ಮೈಸೂರು, ಬೆಂಗಳೂರು ಮುಂತಾದ ಸ್ಥಳಗಳಿಗೆ ಸಂಚರಿಸುವ ವಾಹನಗಳು, ಬದಲಿ ರಸ್ತೆಯಾದ ಚಾರ್ಮಾಡಿ ಘಾಟ್ ಕೊಟ್ಟಿಗೆಹಾರ ಮಾರ್ಗವನ್ನು ಬಳಸಬಹುದು ಎಂದು ಜಿಲ್ಲಾ ಎಸ್ಪಿ ಅವರು ಪ್ರಕಟಣೆಯಲ್ಲಿ ಸಾರ್ವಜನಿಕರಿಗೆ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.