(www.vknews.in) ; ಬೆಥನಿ ಹಿರಿಯ ಪ್ರಾಥಮಿಕ ಶಾಲೆ ಇದರ ವತಿಯಿಂದ 78ನೇ ಸ್ವಾತಂತ್ರ್ಯ ಕಾರ್ಯಕ್ರಮ ಆಚರಣೆಯು ವಿಜ್ರಂಭಣೆಯಿಂದ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಸೈನಿಕ ಹಾಗೂ ಯೂನಿಯನ್ ಬ್ಯಾಂಕ್ ಉದ್ಯೋಗಿ ಸುಬ್ಬಪ್ಪ ಪಾಟಾಲಿ ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳಿಗೆ ಹಿತವಚನವನ್ನು ನೀಡಿದರು.
ಸ್ವಾತಂತ್ರ್ಯದ ಪ್ರಾಮುಖ್ಯತೆ ಹಿರಿಯ ವ್ಯಕ್ತಿಗಳ ಹೋರಾಟದ ಪ್ರತಿಫಲ ಹಾಗೂ ಸ್ವಾತಂತ್ರ್ಯವನ್ನು ಯಾವ ರೀತಿ ನಾವು ಉಪಯೋಗಿಸಿಕೊಳ್ಳಬೇಕು ಎಂಬದನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಪ್ರೊಫೆಸರ್ ಇಸ್ಮಾಯಿಲ್ ಶಾಫಿ, ಶಾಲಾ ಮುಖ್ಯೋಪಾಧ್ಯಾನಿ ಭಗಿನಿ ಸೆಲಿನ್ ಪೇತ್ರ ಹಾಗೂ ಹೈಸ್ಕೂಲ್ ವಿಭಾಗದ ಮುಖ್ಯೋಪಾಧ್ಯಾಯಣಿಭಗಿನಿ ಶಾಂತಿ, ಶಿಕ್ಷಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.