ಪುತ್ತೂರು (www.vknews.in) : ಅನ್ಯ ಕೋಮಿನ ವಿದ್ಯಾರ್ಥಿಯೋರ್ವ ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ಚೂರಿಯಿಂದ ಇರಿದ ಘಟನೆ ನಡೆದಿದೆ. ಗಾಯಗೊಂಡ ವಿದ್ಯಾರ್ಥಿನಿಯನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಪೊಲೀಸರು ತೆರಳಿ ಸಿ ಸಿ ಟಿವಿ ಪರಿಶೀಲನೆ ನಡೆಸಿದ್ದು, ಚೂರಿ ಇರಿದ ಶಾಲಾ ವಿದ್ಯಾರ್ಥಿ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕೆ ಚೂರಿ ಇರಿಯಲಾಗಿದೆ ಎಂಬ ವಿಚಾರ ಇನ್ನಷ್ಟೇ ತಿಳಿದುಬರಬೇಕಿದೆ.
ವಿದ್ಯಾರ್ಥಿನಿಯ ಕೈಯಲ್ಲಿ ರಕ್ತ ಬರುವುದನ್ನು ಗಮನಿಸಿದ ಅದೇ ಶಾಲಾ ಪ್ರಾಂಶುಪಾಲ ಕೈಗೆ ಗ್ಲಾಸು ಬಿದ್ದು ಗಾಯಗೊಂಡಿದೆ ಎಂದು ತಪ್ಪು ಮಾಹಿತಿ ನೀಡಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಕಳುಹಿಸಿ ಕೊಟ್ಟಿದ್ದಾರೆ ಎಂದು ವೀಡಿಯೋದಲ್ಲಿ ವಿದ್ಯಾರ್ಥಿನಿ ಹೇಳಿದ್ದಾಳೆ.
ಕೊಂಬೆಟ್ಟು ಕಾಲೇಜಿನಿಂದ ಪುತ್ತೂರು ಮುಖ್ಯ ಆಂಚೆ ಕಚೇರಿ ಯನ್ನು ಸಂಪರ್ಕಿಸುವ ರಸ್ತೆಯಲ್ಲಿ ಕಾಲೇಜ್ ವಿದ್ಯಾರ್ಥಿಗಳು ಬರುತ್ತಿರುವ ವೇಳೆ ಶ್ರೀಮಹಾಲೀಂಗೇಶ್ವರ ದೇವಸ್ಥಾನದ ಮುಂಭಾಗ ಘಟನೆ ನಡೆದಿದೆ. ವಿದ್ಯಾರ್ಥಿನಿ ಹಾಗೂ ವಿದ್ಯಾರ್ಥಿ ಬೇರೆ ಬೇರೆ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ಎರಡು ಸಮುದಾಯದ ಯುವಕರು ಆಸ್ಪತ್ರೆ ಮುಂಭಾಗ ಜಮಾಯಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.