ಕೋಲಾರ (ವಿಶ್ವ ಕನ್ನಡಿಗ ನ್ಯೂಸ್) : ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ CET, NEET, D-CET, PGCET ಮೂಲಕ ಪದವಿ ಮತ್ತು ಸ್ನಾಯಕೋತ್ತರ ಕೋರ್ಸ್ಗಳಾದ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಇಂಜಿನಿಯರಿಂಗ್ ಮತ್ತು ಟೆಕ್ನಾಲಜೀ, ಬ್ಯಾಚುಲರ್ ಆಫ್ ಆರ್ಕಿಟೆಕ್ಟರ್ MBA, MCA, LLB, BSc in Horticulture, Agricultural Engineering, Dairy Technology, Forestry, Veterinary and animal technology, Fisheries, Sericulture, Home, Community Science Food Nutrition and Dietetics, B.Pharma, M-Pharma, Pharma D and D Pharma
ಇಂತಹ ಪದವಿ ಕೋರ್ಸ್ಗಳಲ್ಲಿ ಆಯ್ಕೆಯಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು ರಿನಿವಲ್ ಸಾಲದ ಯೋಜನೆಯಡಿ ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅಂದರೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು, ಸಿಖ್, ಪಾರ್ಸಿ ಇವರುಗಳು. ಈ ಹಿಂದೆ ವರ್ಷದಲ್ಲಿ ಪಡೆದಿರುವ ಸಾಲದ ಮೊತ್ತದ ಶೇ.12 ರಷ್ಟನ್ನು ಪಾವತಿಸಿ ನಿಗಮದ ವೆಬ್ಸೈಟ್ kmdconline.karnataka.gov.in ನಲ್ಲಿ ಅರ್ಜಿಗಳನ್ನು ಆಕ್ಟೋಬರ್ 31 ರೊಳಗೆ ಸಲ್ಲಿಸಬಹುದು. ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿದ್ದು, ಬೇರೆ ಬೇರೆ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಅರಿವು ವಿದ್ಯಾಭ್ಯಾಸ ಸಾಲ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಸಲ್ಲಿಸಬಹುದು.
ಇಂತಹ ವಿದ್ಯಾರ್ಥಿಗಳು ಯಾವುದೇ ರಿನಿವಲ್ ಮೊತ್ತವನ್ನು ಪಾವತಿಸುವ ಅಗತ್ಯವಿರುವುದಿಲ್ಲ ಹಾಗೂ ಸಲ್ಲಿಸಿದ ಅರ್ಜಿಯ ಹಾರ್ಡ್ ಕಾಪಿಗಳನ್ನು ಮತ್ತು ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿರುವ Original New Idemnity Bond ಮತ್ತು ಇತರೆ ಮೂಲ ದಾಖಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕರ ಕಛೇರಿಗೆ ಸಲ್ಲಿಸಬಹುದುಯೆಂದು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.