ಮಂಡ್ಯ (www.vknews.in) : 20 ವರ್ಷದ ಯುವತಿಯೋರ್ವಳು 60ರ ಅರ್ಚಕನ ಜೊತೆ ಚಾಟಿಂಗ್ ಮಾಡಿ ಆನ್ ಲೈನ್ನಲ್ಲೇ ಅರ್ಚಕನಿಗೆ ಲಕ್ಷ, ಲಕ್ಷ ಪಂಗನಾಮ ಹಾಕಿದ್ದಾರೆ. ಮಂಡ್ಯದ ಪಾಂಡವಪುರ ಮೂಲದ ಅರ್ಚಕ ಈಗ ಸೈಬರ್ ಕ್ರೈಂ ಪೊಲೀಸರ ಮೊರೆ ಹೋಗಿದ್ದಾರೆ.
ಅರ್ಚಕನಿಗೆ ತೆಲಂಗಾಣದ ಮಹಿಳೆಯ ಫೋಟೋ ಬಳಸಿ ಮೋಸ ಮಾಡಲಾಗಿದೆ. ತೆಲಂಗಾಣ ಮೂಲದ ಸಿರಿ ಶ್ರೇಷಾ ಸರಿತಾ ಅನ್ನೋ ಹೆಸರಿನಲ್ಲಿ ನಕಲಿ ಫೇಸ್ಬುಕ್ ಅಕೌಂಟ್ ಓಪನ್ ಮಾಡಲಾಗಿದೆ. ಅದರಲ್ಲಿ 60 ವರ್ಷದ ಅರ್ಚಕನ ಜೊತೆ ಚಾಟಿಂಗ್ ಮಾಡಿ ಮೋಸ ಮಾಡಿದೆ ಎಂದು ದೂರು ನೀಡಲಾಗಿದೆ.
ವೃತ್ತಿಯಲ್ಲಿ ಅರ್ಚಕನಾಗಿರುವ ವಿಜಯ್ ಕುಮಾರ್ಗೆ ಫೇಸ್ ಬುಕ್ನಲ್ಲಿ ಯುವತಿ ಪರಿಚಯ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ ಪರಿಚಯವಾದ ಬಳಿಕ ಇಬ್ಬರ ನಡುವೆ ಆತ್ಮೀಯ ಸಂಭಾಷಣೆ ನಡೆದಿದೆ. ಯುವತಿಯು ಹಲವು ಕಾರಣ ಹೇಳಿ ಆಗಾಗ ಹಣ ಕೇಳುತ್ತಿದ್ದರಂತೆ. ಯುವತಿಯ ಮಾತು ನಂಬಿ ಅರ್ಚಕರು ಫೋನ್ ಪೇ, ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿದ್ದಾರೆ. ಈ ಸಂಬಂಧ ಮಂಡ್ಯ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.