ಉಡುಪಿ (www.vknews.in) : ಉಡುಪಿಯ ಕರಂಬಳ್ಳಿಯಲ್ಲಿ ಕೆರೆಗೆ ಈಜಲು ಹೋದ ಮಣಿಪಾಲದ ಕಾಲೇಜೊಂದರ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ಇಂದ್ರಾಳಿ ನಿವಾಸಿ ಸಿದ್ದಾರ್ಥ್ ಶೆಟ್ಟಿ(17) ಮೃತಪಟ್ಟ ವಿದ್ಯಾರ್ಥಿ.
ಸಿದ್ದಾರ್ಥ್ ನಿನ್ನೆ ಇಬ್ಬರು ಸ್ನೇಹಿತರೊಂದಿಗೆ ಉಡುಪಿಯ ಕರಂಬಳಿ ಕೆರೆಗೆ ಈಜಲು ತೆರಳಿದ್ದನು. ಈ ವೇಳೆ ಈಜಲು ನೀರಿಗಿಳಿದಿದ್ದು, ಈಜಲು ಆಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಇನ್ನಿಬ್ಬರು ಸ್ನೇಹಿತರು ನೀರಿಗೆ ಇಳಿದಿರಲಿಲ್ಲ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.