(www.vknews. in) ಬಂಟ್ವಾಳ : ರಾಪಿಡ್ ಏಕ್ಷನ್ ಫೋರ್ಸ್ ನ ಗೂಡ್ಸ್ ಲಾರಿಯೊಂದು ಮಗುಚಿ ಬಿದ್ದ ಘಟನೆ ಸೋಮವಾರ ಬಂಟ್ವಾಳ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಮೂರ್ಜೆ ಸಮೀಪದ ಕುದ್ರೋಟಿ ಕಟ್ಟೆ ಎಂಬಲ್ಲಿ ನಡೆದಿದೆ.
ಆರ್.ಎ.ಎಫ್ ನ ಲಗೇಜು ತುಂಬಿದ ಲಾರಿ ಭದ್ರಾವತಿಯಿಂದ ಬಿ.ಸಿ.ರೋಡ್ ಕಡೆಗೆ ಹೋಗುತ್ತಿರುವಾಗ ಕುದ್ರೋಟಿ ಕಟ್ಟೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ . ಅಪಘಾತದಿಂದ ಚಾಲಕ ಸಣ್ಣ ಪುಟ್ಟ ಗಾಯಗೊಂಡಿದ್ದು, ಪ್ರಯಾಣಿಕ ಸಾಂತಪ್ಪ ನಾಯಕ್ ಎಂಬುವವರು ಗಾಯಗೊಂಡಿದ್ದು ಅವರನ್ನು ಮಂಗಳೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೂಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.