(www.vknews.in) ಮುಸ್ಲಿಂ ಜಸ್ಟೀಸ್ ಫೋರಂ ಕರ್ನಾಟಕ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಮುಸ್ಲಿಂ ಸಮುದಾಯದ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಮ್ಮೆಲ್ಲರ ಆತ್ಮೀಯರಾಗಿದ್ದ ಹಾಜಿ ಮುಮ್ತಾಝ್ ಅಲಿ ಅವರ ನಿಧನದಿಂದ ಇಡೀ ಸಮುದಾಯಕ್ಕೆ ತೀವ್ರ ಆಘಾತವಾಗಿದೆ ಎಂದು ಮುಸ್ಲಿಂ ಜಸ್ಟೀಸ್ ಫೋರಂ ಕರ್ನಾಟಕ ಸಂತಾಪ ಸೂಚಿಸಿದೆ.
ಈ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಸ್ನೇಹಿತ ವರ್ಗಕ್ಕೆ ಇಲಾಹನು ನೀಡಲಿ ಎಂದು ಮುಸ್ಲಿಂ ಜಸ್ಟೀಸ್ ಫೋರಂ ಕರ್ನಾಟಕ ಇದರ ಅಧ್ಯಕ್ಷರಾದ ಇಕ್ಬಾಲ್ ಸಾಮಾನಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಅಲ್ಲಾಹನು ಅವರ ಪರಲೋಕ ಯಾತ್ರೆಯಲ್ಲಿ ಅವರ ಸಕಲ ಸತ್ಕರ್ಮಗಳನ್ನು ಸ್ವೀಕರಿಸಿ ಸ್ವರ್ಗೋದ್ಯಾನದಲ್ಲಿ ಉನ್ನತ ಸ್ಥಾನಮಾನವನ್ನು ನೀಡಿ ಗೌರವಿಸಲಿ ಎಂದು ಸೃಷ್ಟಿಕರ್ತನಲ್ಲಿ ಪ್ರಾರ್ಥಿಸುತ್ತೇವೆ. ಎಂದು ಮುಸ್ಲಿಂ ಜಸ್ಟೀಸ್ ಫೋರಂ ಕರ್ನಾಟಕ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.