(www.vknews. in)ಮಾಣಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸುದೀಪ್ ಕುಮಾರ್ ಶೆಟ್ಟಿ ಅಧಿಕಾರ ಸ್ವೀಕಾರ
ಬಂಟ್ವಾಳ : ಮಾಣಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸುದೀಪ್ ಕುಮಾರ್ ಶೆಟ್ಟಿಯವರು ಅಧಿಕಾರ ವಹಿಸಿಕೊಂಡರು.
ಮಾಣಿ ಗ್ರಾಮ ಪಂಚಾಯತ್ ನ 2 ನೇ ಅವಧಿಗೆ ಅಧ್ಯಕ್ಷರಾಗಿದ್ದ ಇಬ್ರಾಹಿಂ ಕೆ.ಮಾಣಿ ಅವರು ತನ್ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾದ ಅದ್ಯಕ್ಷ ಸ್ಥಾನಕ್ಕೆ ಸುದೀಪ್ ಕುಮಾರ್ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಸುಜಾತ ಪೂಜಾರಿಯವರು ಮುಂದುವರಿಯಲಿದ್ದಾರೆ.
ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಸುದೀಪ್ ಕುಮಾರ್ ಶೆಟ್ಟಿ ಅವರು ಮಾಣಿ ಯುವಕ ಮಂಡಲದ ಅಧ್ಯಕ್ಷರಾಗಿ, ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುತ್ತಾರೆ.
ಚುನಾವಣಾಧಿಕಾರಿಯಾಗಿ ಬಂಟ್ವಾಳ ಪ್ರಭಾರ ತಹಶೀಲ್ದಾರ್ ಅರವಿಂದ್ ಕೆ.ಎಮ್ ರವರು ಕಾರ್ಯನಿರ್ವಹಿಸಿದರು. ಉಪ ತಹಶೀಲ್ದಾರ್ ನವೀನ್ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ, ತಾಲೂಕು ಪಂಚಾಯತ್ ನ ಮಂಜುನಾಥ್ ಮತ್ತು ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ವಿ.ಪೂಜಾರಿ, ಮಾಣಿ ಗ್ರಾಮ ಪಂಚಾಯತ್ ನಿಕಟಪೂರ್ವ ಆಧ್ಯಕ್ಷ ಇಬ್ರಾಹಿಂ.ಕೆ.ಮಾಣಿ, ಮಾಜಿ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಸದಸ್ಯರಾದ ಮೆಲ್ವಿನ್ ಕಿಶೋರ್ ಮಾರ್ಟಿಸ್, ರಮಣಿ.ಡಿ.ಪೂಜಾರಿ, ಪ್ರೀತಿ ಡಿನ್ನಾ ಪಿರೇರಾ, ಸೀತಾ, ಕೊಡಾಜೆ ಐಕ್ಯ ವೇದಿಕೆಯ ಪತ್ರಿಕಾ ಕಾರ್ಯದರ್ಶಿ ಸಲೀಂ ಮಾಣಿ ಮೊದಲಾದವರು ಉಪಸ್ಥಿತರಿದ್ದು ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.