ಕೊಟ್ಟಾಯಂ (www.vknews.in): ಪತಿಯ ಮನೆಯಲ್ಲಿ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕೊಟ್ಟಾಯಂನಲ್ಲಿ ನಡೆದಿದೆ. ಮೃತರನ್ನು ಪೆರುಂಬವೂರು ಮೂಲದ ಆರ್ಯ ಎಂದು ಗುರುತಿಸಲಾಗಿದೆ. ಪ್ರಕರಣದ ಸಾವಿನ ಬಗ್ಗೆ ನಿಗೂಢತೆ ಇದೆ ಎಂದು ಮೃತರ ಕುಟುಂಬ ಆರೋಪಿಸಿದೆ.
ಆರ್ಯ ಅವರು ನಟ್ಟಕಂ ನಿವಾಸಿ ದೀಪಕ್ ಬಾಬು ಅವರನ್ನು ವಿವಾಹವಾಗಿದ್ದರು. ಮದುವೆಯ ಬಳಿಕ ಪತಿಯ ತಾಯಿ ಹಾಗೂ ಅಜ್ಜಿ ವರದಕ್ಷಿಣೆ ವಿಚಾರವಾಗಿ ಕಿರುಕುಳ ನೀಡುತ್ತಿದ್ದರು ಎಂದು ಮಹಿಳೆಯ ಸಂಬಂಧಿಕರು ಆರೋಪಿಸಿದ್ದಾರೆ. ಅಲ್ಲದೆ, ಆರ್ಯ ಅವರ ದೇಹದ ಮೇಲೆ ಹೊಡೆತದ ಗುರುತುಗಳಿದ್ದವು ಎಂದು ಕುಟುಂಬದವರು ಆರೋಪಿಸಿದ್ದಾರೆ.
ಏತನ್ಮಧ್ಯೆ, ಕೊಟ್ಟಾಯಂ ಪೂರ್ವ ಪೊಲೀಸರು ದಾಖಲಿಸಿರುವ ಎಫ್ಐಆರ್ನಲ್ಲಿ ಆರ್ಯ ಅವರ ಸಾವಿಗೆ ಪತಿ ದೀಪಕ್ ಬಾಬು ಅವರ ಮದ್ಯಪಾನದ ಸಮಸ್ಯೆ ಕಾರಣವೆಂದು ಉಲ್ಲೇಖಿಸಲಾಗಿದೆ ಎಂದು ವರದಿಯಾಗಿದೆ. ಆದರೆ, ಕುಟುಂಬದವರು ಇದನ್ನು ಪ್ರಶ್ನಿಸಿದ್ದು, ಪ್ರಕರಣದಲ್ಲಿ ಹೆಚ್ಚಿನ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಈ ಸಂಬಂಧ ಡಿವೈಎಸ್ಪಿಗೆ ದೂರು ನೀಡಲು ಕುಟುಂಬ ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಆರ್ಯ ಅವರ ಸಾವಿನ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಕುಟುಂಬ ಮಾಡಿರುವ ವರದಕ್ಷಿಣೆ ಕಿರುಕುಳ ಹಾಗೂ ಇತರ ಆರೋಪಗಳ ಸತ್ಯಾಸತ್ಯತೆ ತನಿಖೆಯ ಬಳಿಕ ಸ್ಪಷ್ಟವಾಗಬೇಕಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.